ಮಡಿಕೇರಿ ಜು.2 : ಕಾರು ಮತ್ತು ಈಚರ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಅಗ್ನಿ ಕಾಣಿಸಿಕೊಂಡ ಪರಿಣಾಮ ಕಾರು ಚಾಲಕ ಸಜೀವ ದಹನವಾದ ಘಟನೆ ಗುಂಡ್ಲುಪೇಟೆಯ ಹಿರೀಕಾಟಿ ಗೇಟ್ ಬಳಿ ನಡೆದಿದೆ.
ಮೈಸೂರಿನ ಮುಜಾಮಿಲ್ ಅಹಮದ್(35) ಮೃತಪಟ್ಟ ಚಾಲಕನಾಗಿದ್ದು, ಈಚರ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಈಚರ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾಗದೆ ಸಜೀವವಾಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೋ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.