ಬೆಂಗಳೂರು ಜು.3 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ವೇದಿಕೆಯಲ್ಲಿ ನಾಡೋಜ ಡಾ.ಗೋ.ರು.ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.