ಮಡಿಕೇರಿ ಜು.3 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ವಾರ್ಷಿಕ ಮಹಾಸಭೆ ಜು.9 ರಂದು ಬೆಳಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ.
ಮಹಾಸಭೆಯ ನಂತರ ಜಿಲ್ಲಾ ಸಮಿತಿಯ ಪುನರ್ ರಚನಾ ಪ್ರಕ್ರಿಯೆ ನಡೆಯಲಿದ್ದು, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 95917 93301 ನ್ನು ಸಂಪರ್ಕಿಸಬಹುದಾಗಿ.









