ಮಡಿಕೇರಿ ಜು.3 : ಕಾಳುಮೆಣಸು ಕೊಡಗು ಜಿಲ್ಲೆಯ ಬಹು ವಾರ್ಷಿಕ ಸಾಂಬಾರು ಬೆಳೆ. ಇದನ್ನು ಕಾಫಿ, ಅಡಿಕೆ, ಏಲಕ್ಕಿ ತೋಟದಲ್ಲಿ ಅಂತರ ಬೆಳೆಯಾಗಿ ಜಿಲ್ಲೆಯಾದ್ಯಂತಹ ಬೆಳೆಯಲಾಗುತ್ತಿದೆ. ಇತ್ತೀಚೆಗೆ ಕಾಳು ಮೆಣಸು ಬೆಳೆಗೆ ಅನೇಕ ರೋಗಗಳು ತೀವ್ರಗತಿಯಲ್ಲಿ ಕಂಡು ಬರುತ್ತಿದ್ದು, ಕೃಷಿಕನಿಗೆ ಹೆಚ್ಚು ಆರ್ಥಿಕ ಹಾನಿಯನ್ನುಂಟು ಮಾಡುತ್ತೀವೆ.
ಅದರಲ್ಲಿಯೂ ಮುಖ್ಯವಾಗಿ ಇತ್ತೀಚೆಗೆ ಕೊಡಗು ಜಿಲ್ಲೆಯಾದ್ಯಂತಹ ಕಾಫಿ ತೋಟದಲ್ಲಿ ಬೆಳೆಸಲಾಗುತ್ತಿರುವ ಕಾಳುಮೆಣಸಿನ ಬಳ್ಳಿಗಳಲ್ಲಿ ಎಲೆಗಳು ಚಿಕ್ಕದಾಗಿ, ಬಳ್ಳಿಗಳು ಸಾಯುವುದು ಇಲ್ಲ ಅಥವಾ ಬೆಳವಣಿಗೆಯೂ ಇಲ್ಲದೆ, ಕಾಳುಮೆಣಸು ಬಿಡದೆ ಇರುವ ಬಳ್ಳಿಗಳು ದಿನೇ ದಿನೇ ಹೆಚ್ಚಾಗುತ್ತಿರುತ್ತವೆ. ಇದಕ್ಕೆ ಮೂಲ ಕಾರಣ ನಂಜಾಣುವಿನ ಭಾದೆಗೆ ತುತ್ತಾಗುತ್ತಿರುವುದು.
ಈ ನಿಟ್ಟಿನಲ್ಲಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನಂಜಾಣುವಿನ ಭಾದೆಗೆ ತುತ್ತಾಗಿರುವ ಬಳ್ಳಿಗಳನ್ನು ಪುನಶ್ಚೇತನಗೂಳಿಸಲು ಕೇರಳ ರಾಜ್ಯದ ಕ್ಯಾಲಿಕಟ್ ಭಾರತೀಯ ಸಾಂಬಾರು ಬೆಳೆಗಳ ಸಂಶೋಧನ ಸಂಸ್ಥೆ ಅವರು ಶಿಫಾರಸ್ಸು ಮಾಡಿರುವ ಸಮಗ್ರ ತಂತ್ರಜ್ಞಾನಗಳ ಪರಿಚಯವನ್ನು ರೈತರಿಗೆ ತಿಳಿಸಲು ಜಿಲ್ಲೆಯ 10 ತೋಟಗಳಲ್ಲಿ ಮೂಂಚೂಣಿ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದೆ.
ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು ಇದರ ಸಸ್ಯ ಸಂರಕ್ಷಣಾ ತಜ್ಞರಾದ ಡಾ.ಕೆ.ವಿ.ವೀರೇಂದ್ರ ಕುಮಾರ್ ಇವರು ವಿವಿದ ಸಮಗ್ರ ರೋಗ ನಿರ್ವಹಣಾ ತಂತ್ರಜ್ಞಾನಗಳಾದ ವರ್ಷದಲ್ಲಿ ಜೂನ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಪೆಪ್ಪೆರ್ ಸ್ಪೇಷಲ್ ಮತ್ತು ಸಮುದ್ರ ಕಳೆಯ ಸಿಂಪರಣೆ, ಕಹಿ ಬೇವಿನ ಹಿಂಡಿಯ ಪುಡಿಯನ್ನು ಬುಡಕ್ಕೆ ಹಾಕುವ ಮತ್ತು ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬುಡಕ್ಕೆ ಸುರಿಯುವ, ಡಿಸೆಂಬರ್ ತಿಂಗಳಿನಲ್ಲಿ ಪೆÇಟ್ಯಾಷಿಯಂ ನೈಟ್ರೇಟ್ನ ಸಿಂಪರಣೆ ಮಾಡುವ ಪ್ರಾತ್ಯಕ್ಷಿಕೆಯನ್ನು ಕೊಣನಕಟ್ಟೆಯ ಕುಶಾಲಪ್ಪನವರ ತೋಟದಲ್ಲಿ ತೋರಿಸಿಕೊಟ್ಟರು. ಈ ಸಮಗ್ರ ತಂತ್ರಜ್ಞಾನಗಳನ್ನು ಕಾಳುಮೆಣಸಿನ ತೋಟಗಳಲ್ಲಿ ಅಳವಡಿಸಿಕೊಂಡರೆ ನಂಜಾಣುವಿನ ಭಾದೆಗೆ ತುತ್ತಾಗಿರುವ ಬಳ್ಳಿಗಳನ್ನು ಪುನಶ್ಚೇತನಗೊಳಿಸಬಹುದು ಎಂದು ತಿಳಿಸಿದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*