ಮಡಿಕೇರಿ ಜು.3 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ `ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ.
ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳಿದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಕೀಲರ ಸಹಕಾರದಿಂದ ಲೋಕ್ ಅದಾಲತ್ ಕಾರ್ಯಕ್ರಮ ಯಶಸ್ವಿಗೊಳಿಸಲಾಗುತ್ತದೆ ಎಂದು ಡಿ.ಟಿ.ಪುಟ್ಟರಂಗಸ್ವಾಮಿ ಹೇಳಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದರು.
ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣ(ವಿಚ್ಛೇದನೆ ಪ್ರಕರಣ ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಲೋಕ್ ಅದಾಲತ್ ಮಹತ್ವದ ಬಗ್ಗೆ ತಿಳಿಸಿದರು.
ಮತ್ತಷ್ಟು ಮಾಹಿತಿ: ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*