ಬೆಂಗಳೂರು ಜು.4 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು.










