ಮಡಿಕೇರಿ ಜು.4 : ಉತ್ತಮ ವ್ಯಕ್ತಿತ್ವದ ಜೊತೆಯಾಗಿದ್ದರೆ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಅಭಿಪ್ರಾಯಪಟ್ಟರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗ ಆಯೋಜಿಸಿದ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕಲೆ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.
ನಾನು ನನ್ನವರು, ನನ್ನ ತನದಿಂದ ಮುಕ್ತವಾಗಿ ಸಮಾಜಮುಖಿ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಾಗಿದೆ. ಬುದ್ಧ ತ್ಯಾಗದ ಮೂಲಕ, ಮದರ್ ಥೆರೆಸಾ ಸೇವೆಯ ಮೂಲಕ, ಮಹಮ್ಮದ್ ಫೈಗಂಬರ್ ದಾನದಶೀಲತೆಯ ಮೂಲಕ, ಅಂಬೇಡ್ಕರ್ ಜ್ಞಾನದ ಮೂಲಕ, ಗಾಂಧಿ ಅಹಿಂಸೆಯ ಮೂಲಕ ಸಾಮಾಜಿಕ ವ್ಯಕ್ತಿತ್ವವನ್ನು ರೂಪಿಸಿಕೊಂಡರು.ಇತಿಹಾಸದಲ್ಲಿ ಸ್ಥಾನ ಪಡೆಯಬೇಕಾದರೆ ಸಮಾಜಮುಖಿ ವ್ಯಕ್ತಿತ್ವವನ್ನು ಮೈಗೊಡಿಸಿಕೊಳ್ಳಬೇಕಾಗಿದೆ ಎಂದರು.
ಕಾಲೇಜಿನ ಐಕ್ಯೂಎಸ್ ಸಿ ಸಂಯೋಜಕರಾದ ಡಾ. ರಾಜೇಂದ್ರ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕಾಗಿ ವ್ಯಕ್ತಿತ್ವ ವಿಕಸನದಂತಹ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚು ಇದೆ. ಜಾಗತಿಕವಾಗಿ ಸ್ಫರ್ಧಾತ್ಮಕ ಜಗತ್ತಿನಲ್ಲಿ ಕಾರ್ಯಪ್ರವೃತ್ತರಾಗಲು ಸಂವಹನ ಕಲೆ ತುಂಬಾ ಮುಖ್ಯ ಎಂಬುದನ್ನು ತಿಳಿಸಿದರು.
100ಕ್ಕೂ ಅಧಿಕ ಕಾರ್ಯಾಗಾರಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿದ ಮಂಗಳೂರಿನ ಸಂಜೆ ಕಾಲೇಜಿನ ಅಧ್ಯಾಪರಕು ಹಾಗೂ ವ್ಯಕ್ತಿತ್ವ ವಿಕಸನದ ತರಬೇತುದಾರರಾದ ಡಾ. ಸ್ಟೀವನ್ ಡಿಸೋಜ, ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕಲೆಯ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು.
ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ದಿ ವಿಭಾಗದ ಸಂಯೋಜಕರಾದ ಪವಿತ್ರ, ಕುಮಾರಿ ಅಮೃತ, ಗುಣಶ್ರೀ ಕಾರ್ಯಕ್ರಮದಲ್ಲಿ ಹಾಜರಿದ್ದರು.