ಮಡಿಕೇರಿ ಜು.4 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲಿ ಮಾಡಲು ಅವಕಾಶವಿದೆ.
ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ. ಪ್ರಾದೇಶಿಕ ಕೇಂದ್ರ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಟ್ಟಡ, ಮಡಿಕೇರಿ-571201, ದೂ.ಸಂ.08272-201147/ 8073342310/ 9141938803/ 8296215714/ 9611320191 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
Breaking News
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
- *ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿದ ಶಾಂತಿನಿಕೇತನದ ಶ್ರೀಮಹಾಗಣಪ*
- *ಶಾಸಕ ಡಾ.ಮಂತರ್ ಗೌಡ ಮಡಿಕೇರಿ ನಗರ ಸಂಚಾರ : ದಸರಾದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*