ಮಡಿಕೇರಿ ಜು.4 : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ಮಾದಕ ವಸ್ತು(ಡ್ರಗ್ಸ್) ದುರುಪಯೋಗ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವು ಜು.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಮನೋ ವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆಯ ನಿರ್ದೇಶಕರು ಹಾಗೂ ದಾವಣಗೆರೆ ದೊಡ್ಡಬಾತಿ ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ.ವಿ.ಎಂ.ಶಶಿಕುಮಾರ್, ರಾಜ್ಯಮಟ್ಟದ ಸಮನ್ವಯ ಸಂಸ್ಥೆಯ ಯೋಜನೆಯ ಸಂಯೋಜಕರಾದ ಶೈಲಶ್ರೀ, ಕುಶಾಲನಗರ ಶಕ್ತಿಧಾಮದ ಯೋಜನೆಯ ಸಂಯೋಜಕರಾದ ಕೆ.ಒ.ಪ್ರಭು, ಇತರರು ಪಾಲ್ಗೊಳ್ಳಲಿದ್ದಾರೆ.









