ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿನಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲ್ಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸುರೇಶ್ ಗಟ್ಟಿ (52) ಎಂಬುವವರೇ ಸಾವನ್ನಪಿರುವ ದುರ್ದೈವಿ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಗಾಳಿ, ಮಳೆ ವ್ಯಾಪಕವಾಗಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.










