ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದ್ದು, ಜು.9 ರಂದು ಬೆಂಗಳೂರಿನ ಚಾಮರಾಜಪೇಟೆ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭದ ಅಂಗವಾಗಿ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂವತ್ತು ಮಂದಿ ಕವಿ ಕವಯತ್ರಿಯರು ಅವಕಾಶ ಪಡೆದಿದ್ದಾರೆ. ಈ ಪೈಕಿ ಕೊಡಗು ಜಿಲ್ಲೆಯಿಂದ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ ಎಂದು ಖಿದ್ಮಾ ಫೌಂಡೇಶನ್ನ ರಾಜ್ಯ ಸಂಚಾಲಕ ಅಮೀರ್ ಬನ್ನೂರು ತಿಳಿಸಿದ್ದಾರೆ.