ಕುಶಾಲನಗರ ಜು.5 : ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಉತ್ತಮ ಪರಿಸರ ವ್ಯವಸ್ಥೆಯೊಂದಿಗೆ ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಮಾಡಲು ಸಮುದಾಯದ ಸಹಕಾರ ಅಗತ್ಯ ಎಂದು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹೇಳಿದರು.
ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಶಾಲಾವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 100 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಉತ್ತಮಹಸಿರು ಹೊದಿಕೆಯೊಂದಿಗೆ ಶೇ.45 ರಷ್ಟು ಅರಣ್ಯ ಪ್ರದೇಶವಿದೆ.
ಜಿಲ್ಲೆಯ ಶಾಲಾ- ಕಾಲೇಜು, ಸರ್ಕಾರಿ ಸಂಸ್ಥೆಗಳ ಆವರಣ, ಅರಣ್ಯ ಇಲಾಖೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅರಣ್ಯ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಜಿಲ್ಲೆಯಲ್ಲಿ ಅರಣ್ಯ ಪ್ರದೇಶವನ್ನು ವೃದ್ಧಿಸಲು ಕ್ರಮವಹಿಸಲಾಗಿದೆ ಎಂದರು.
ಸ್ವಚ್ಛಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಪ್ರಸ್ತುತ ಕಾರ್ಖಾನೆ, ವಾಹನಗಳ ದಟ್ಟಣೆಯಿಂದ ಅಪಾರ ಪ್ರಮಾಣದಲ್ಲಿ ಪರಿಸರ ಹಾನಿ ಉಂಟಾಗುತ್ತಿದೆ. ಹೀಗಾಗಿ ನಗರದಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು ಉತ್ತಮ ವಾತಾವರಣ ನಿರ್ಮಿಸುವ ಕೆಲಸ ಮಾಡಬೇಕು ಎಂದು ಪೂವಯ್ಯ ಹೇಳಿದರು.
ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿಕೊಂಡು ತಲಾ ಒಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬನ ಕರ್ತವ್ಯವಾಗಿದ್ದು, ಪ್ರಕೃತಿ ನೀಡುವ ಆಮ್ಲಜನಕದ ಮಹತ್ವವನ್ನು ನಾವು ಅರಿಯಬೇಕಾಗಿದೆ ಎಂದರು.
ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಅರುಣ್ ರಾವ್ ಮಾತನಾಡಿ, ಇಂತಹ ಪರಿಸರ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ.ಅಯಚ್ಚು, ಎನ್.ಎಸ್.ಎಸ್.ಅಧಿಕಾರಿ ಎ.ಎ.ಲಕ್ಷ್ಮಣ್ ಮಾತನಾಡಿದರು.
ಕಾವೇರಿ ನದಿ ಸಂರಕ್ಷಣಾ ಸಮಿತಿಯ ಸಂಚಾಲಕ ಎಂ.ಎನ್.ಚಂದ್ರಮಹೋಹನ್, ಎಸಿಎಫ್ ಎ.ಎ.ಗೋಪಾಲ್, ಆರ್.ಎಫ್.ಓ. ಕೆ.ವಿ.ಶಿವರಾಂ, ಡಿಆರ್ ಎಫ್ ಓ ಗಳಾದ ಅನಿಲ್ ಡಿ’ಸೋಜ,ಕೆ.ಎನ್. ದೇವಯ್ಯ, ಕೆ.ಎಸ್.ಸುಬ್ರಾಯ,
ಲ್ಯಾಂಪ್ಸ್ ಸೊಸೈಟಿಯ ಮಾಜಿ ಅಧ್ಯಕ್ಷ ಕೆ.ಸಿ.ಉದಯಕುಮಾರ್, ಕಾಳಿಂಗ, ನಿರ್ದೇಶಕಿ
ಕಾವೇರಿ,ಅರಣ್ಯ ರಕ್ಷಕರಾದ ಮಂಜೇಗೌಡ, ದಿನೇಶ್, ಸಿದ್ದರಾಮ, ಶಿಕ್ಷಕರು ಅರಣ್ಯ ವೀಕ್ಷಕರು, ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “ಕಾಡು ಬೆಳೆಸಿ ನಾಡು ಉಳಿಸಿ’, ‘ಹಸಿರೇ ಉಸಿರು’, ‘ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆ’, ‘ಗಿಡನೆಟ್ಟು ಬೆಳೆಸೋಣ ಬನ್ನಿ’ ಎಂಬಿತ್ಯಾದಿ ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಹಾಕಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*