ವಿರಾಜಪೇಟೆ ಜು.5 : ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಶಿಸ್ತು ಬದ್ಧ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವುದು ಕೊಡಗು ಜಿಲ್ಲೆ ಮಾತ್ರ ಎಂದು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು.
ಕಾಕೋಟುಪರಂಬು ಕೃಷಿ ಪತ್ತಿನ ಸಹಕಾರ ಸಂಘದ ರೂ.45 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ಕಟ್ಟಿ ಬೆಳೆಸಿದ ಸಹಕಾರಿ ಸಂಸ್ಥೆಗಳು ಇಂದಿಗೂ ಉತ್ತಮವಾಗಿದೆ ಎಂದರೆ ನಾವು ಅವರಿಗೆ ನೀಡುತ್ತಿರುವ ಗೌರವ ಎಂದರು.
ಜಿಲ್ಲೆಯ ಒಂದೆರಡು ಸಹಕಾರಿ ಸಂಸ್ಥೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಸಹಕಾರಿ ಸಂಸ್ಥೆಗಳು ಅವ್ಯವಹಾರ ಹಾಗೂ ಹಣ ದುರುಪಯೋಗ ಇಲ್ಲದೆ ಪ್ರಗತಿ ಸಾಧಿಸಿದೆ ಎಂದು ಶ್ಲಾಘಿಸಿದರು.
ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿಯೇ ಆರಂಭಗೊಂಡ ಸಹಕಾರಿ ಕ್ಷೇತ್ರ ಗ್ರಾಮೀಣ ಭಾಗದಲ್ಲಿ ಪ್ರಗತಿ ಸಾಧಿಸಿ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಪೈಪೆÇೀಟಿ ನೀಡುತ್ತಿರುವುದು ಅವರುಗಳಿಗೆ ನುಂಗಲಾರದ ತುತ್ತಾಗಿದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದರೆ ಸಹಕಾರ ಸಂಘಗಳು ಉಳಿದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಮಾತನಾಡಿ, ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಸಂಘ ಸಂಸ್ಥೆಗಳಿದ್ದು, ಅದರಲ್ಲಿ 71 ಸಹಕಾರಿ ಸಂಘ ಹಾಗೂ ಬ್ಯಾಂಕುಗಳು ಲಾಭದಲ್ಲಿ ಮುಂದುವರೆiÀುುತ್ತಿವೆ. ಹಲವು ಸಹಕಾರಿ ಬ್ಯಾಂಕ್‍ಗಳು ಕೋಟಿಗಳಲ್ಲಿ ವ್ಯವಹಾರ ನಡೆಸುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಪೈಪೆÇೀಟಿ ನೀಡುತ್ತಿವೆ. ಜಿಲ್ಲೆಯ ಸಹಕಾರ ಕ್ಷೇತ್ರ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಎಲ್ಲಾ ಜಿಲ್ಲೆಗಳಿಗೆ ಮಾದರಿಯಾಗಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫ್ರೂಟ್ ತಂತ್ರಾಂಶ ಬೇರೆ ಜಿಲ್ಲೆಗಳಿಗೆ ವರದಾನವಾದರೆ ಕೊಡಗು ಜಿಲ್ಲೆಯ ಮಟ್ಟಿಗೆ ಮಾರಕವಾಗಿದೆ. ಈ ತಂತ್ರಾಂಶದಿಂದ ಜಿಲ್ಲೆಯ ರೈತರಿಗೆ ಸಹಕಾರಿ ಬ್ಯಾಂಕುಗಳಿಂದ ಸಾಲ ಸೌಲಭ್ಯಗಳನ್ನು ಪಡೆಯಲು ಕಷ್ಟವಾಗುತ್ತಿರುವ ಕಾರಣ ಜಿಲ್ಲೆಯ ಶಾಸಕರುಗಳು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ವಿಧಾನಸಭೆಯಲ್ಲಿ ಧ್ವನಿ ಎತ್ತಿ ಜಿಲ್ಲೆಯ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ಹೇಳಿದರು.
ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪೂಳಂಡ ವಿನು ಪೆಮ್ಮಯ್ಯ ಮಾತನಾಡಿ, ಸಹಕಾರಿ ಸಂಘವು 1959ರಲ್ಲಿ 451 ಸದಸ್ಯರೊಂದಿಗೆ ಪ್ರಾರಂಭಗೊಂಡು ಪ್ರಸ್ತುತ 930 ಸದಸ್ಯರಿದ್ದಾರೆ. ಸಂಘದ ಹಳೆಯ ಕಟ್ಟಡ ರಸ್ತೆ ಬದಿಯಲ್ಲಿದ್ದ ಕಾರಣ ರಸ್ತೆ ವಿಸ್ತರಣೆ ಆಗುವ ಸಂದರ್ಭ ಕಟ್ಟಡಕ್ಕೆ ಹಾನಿ ಉಂಟಾಗುವುದರಿಂದ ಕಾಕೋಟುಪರಂಬು ಕಾಲಭೈರವ ದೇವಾಲಯ ಸಮಿತಿ ಸಂಘಕ್ಕೆ 25ಸೆಂಟ್ ಜಾಗವನ್ನು ಉದಾರವಾಗಿ ನೀಡಿದ ಫಲವಾಗಿ ಕಟ್ಟಡ ನಿರ್ಮಿಸಲು ಸಾಧ್ಯವಾಯಿತು ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭ ಶಾಸಕ ಎ.ಎಸ್ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೇವಡ ಸುಬ್ಬಯ್ಯ, ಮಂಡೇಟಿರ ದೇವಯ್ಯ, ಕಟ್ಟೆರ ಕುಟ್ಟಪ್ಪ, ಮಂಡೇಟಿರ ಸುರೇಶ್, ಚಂಬಂಡ ಮಾಚಯ್ಯ, ಬಾಚಿರ ಬಿದ್ದಪ್ಪ, ಪಾಳೆಯಂಡ ರಾಬಿನ್ ದೇವಯ್ಯ, ಗುತ್ತಿಗೆದಾರರಾದ ಮೇವಡ ಪೂವಯ್ಯ, ಪೊನ್ನಕಚ್ಚಿರ ಸುಭಾಷ್ ಅವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕೇಂದ್ರ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ನಿರ್ದೇಶಕರಾದ ಪಟ್ರಪಂಡ ರಘು ನಾಣಯ್ಯ, ಹೊಟ್ಟೆಂಗಡ ರಮೇಶ್ ಕೋಲತಂಡ ಸುಬ್ರಮಣಿ, ಅರುಣ್ ಭೀಮಯ್ಯ, ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ಎಸ್ ಮೋಹನ್, ವ್ಯವಸ್ಥಾಪಕ ಕಟ್ಟೇರ ಪೂಣಚ್ಚ ಮತ್ತಿತರರು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಮೇವಡ ವಶ್ಮಾ, ಸೀಮಾ, ಮಂಡೆಟಿರ ಅನಿಲ್, ಮೂಳೆರ ಸುಬ್ಬಯ್ಯ ಇದ್ದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*