ಮಡಿಕೇರಿ ಜು.5 : 2021-22ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಗೌರವಿಸಿದರು.
ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾ.ಪಂ.ನ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಪ್ರಶಸ್ತಿ ಸ್ವೀಕರಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಯೋಜನಾ ನಿರ್ದೇಶಕರಾದ ಜಗದೀಶ್, ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.









