ಮಡಿಕೇರಿ ಜು.5 : ಕಿರಗಂದೂರು ಗ್ರಾ.ಪಂ ವ್ಯಾಪ್ತಿಯ ತಾಕೇರಿ, ಕಿರಗಂದೂರು, ಬಿಳಿಗೇರಿ ಗ್ರಾಮಗಳಿಗೆ ಸಂಬಂಧಿಸಿದ ಪೌತಿ ಖಾತೆ ಆಂದೋಲನವು ಕಿರಗಂದೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.
ತಹಶೀಲ್ದಾರ್ ನರಗುಂದ್‍ಅಧ್ಯಕ್ಷತೆಯಲ್ಲಿ ನಡೆದ ಆಂದೋಲನದಲ್ಲಿ ಕಂದಾಯ ಪರಿವೀಕ್ಷಕರಾದ ಸಿ.ಎನ್.ಪ್ರಹ್ಲಾದ್, ಗ್ರಾಮ ಆಡಳಿತ ಅಧಿಕಾರಿ ಹೆಚ್.ಎನ್.ಕುಮಾರಿ, ಗ್ರಾ.ಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.









