ಸುಂಟಿಕೊಪ್ಪ ಜು.5 : ಕೊಡಗರಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು.
ಗ್ರಾ.ಪಂ ಸಭಾಂಗಣದಲ್ಲಿ ನಡೆದ ಆಂದೋಲನದ ಅಧ್ಯಕ್ಷತೆಯನ್ನು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಪ್ರಕಾಶ್ ವಹಿಸಿದ್ದರು.
ಈ ಸಂದರ್ಭ ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ಪ ಮಾತನಾಡಿ, ಸರಕಾರ ಮಹತ್ತರ ಯೋಜನೆಗಳಲ್ಲಿ ಒಂದಾಗಿದೆ. ರೈತಾಪಿ ವರ್ಗದವರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳೇ ಆಗಮಿಸಿ ಜನತೆಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ, ಉಲುಗುಲಿ, ನಾರ್ಗಾಣೆ ಗ್ರಾಮದ ಕೃಷಿಕರು ಹಾಗೂ ಸಾರ್ವಜನಿರು ಪಾಲ್ಗೊಂಡಿದ್ದರು.
ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮ ಲೆಕ್ಕಿಗಾರುಗಳಾದ ಜಯಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್, ಗ್ರಾ.ಪಂ ಸದಸ್ಯೆ ನೀತಾ, ಚೆನ್ನಬಸವಿ, ಸಿಬ್ಬಂದಿಗಳಾದ ಧನಂಜಯ ಹಾಗೂ ಗ್ರಾಮ ಸಹಾಯಕರು ಇದ್ದರು.