ಮಡಿಕೇರಿ ಜು.5 : ಕರಡಿಯೊಂದು ರೈತ ಹಾಗೂ ಹಸುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಅರಣ್ಯದಿಂದ ಬಂದು ಗ್ರಾಮಕ್ಕೆ ಲಗ್ಗೆ ಇಟ್ಟ ಕರಡಿ ಜಮೀನಿಗೆ ತೆರಳುತ್ತಿದ್ದ ರೈತ ನರಸಿಂಹ ಮೂರ್ತಿ ಎಂಬುವವರ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ನಂತರ ಸಮೀಪದ ಮನೆಯಲ್ಲಿದ್ದ ಹಸುವಿನ ಮೇಲೂ ದಾಳಿ ಮಾಡಿದೆ.
ರೈತ ಹಾಗೂ ಹಸುವಿಗೆ ಚಿಕಿತ್ಸೆ ನೀಡಲಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಲ್ಲದೆ ಕರಡಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ, ಆದರೂ ಗ್ರಾಮದಲ್ಲಿ ಆತಂಕದ ವಾತಾವರಣ ಮುಂದುವರೆದಿದೆ.










