ಮಡಿಕೇರಿ ಜು.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 37ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.
ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ಜಾರಿಗೊಳಿಸಿದರು ಎಂದು ಹೇಳಿದರು.
ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ನುಡಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಷಾ, ಇತರರು ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*