ವಿರಾಜಪೇಟೆ ಜು.6 : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮತ್ತು ಮಳೆಗಾಲದ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗುತ್ತದೆ ಎಂದು ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮಾಹಿತಿ ನೀಡಿದರು.
ನಗರ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಘಟಕದ ವತಿಯಿಂದ ಶಾಸಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಅಲ್ಲದೇ ಸಾಮಾಜಿಕ ತಳಹದಿಯ ಮೇಲೆ ಕಾರ್ಯಕ್ರಮ ರೂಪಿಸಬೇಕು ಎಂಬ ಮನೋಭಾವದಿಂದ ಜು.9 ರಂದು ರವಿವಾರದಂದು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಮಳೆಗಾಲದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ದಿನದ 24*7 ಯುವಕರ ಕಾರ್ಯಪಡೆಯನ್ನು ಸಿದ್ದಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪುರಸಭೆ ಸದಸ್ಯರ ಮುಂದಾಳತ್ವದಲ್ಲಿ ಎಎಸ್‍ಪಿ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗಿದ್ದು, 9ರಂದು ಅಧಿಕೃತವಾಗಿ ಕಾರ್ಯಪಡೆಗೆ ಚಾಲನೆ ನೀಡುವುದರೊಂದಿಗೆ ಘಟಕದ ಲೋಗೋ ಬಿಡುಗಡೆಗೊಳಿಸಿ ಹೆಲ್ಪ್‍ಲೈನ್ ಸಂಖ್ಯೆ ನೀಡಲಾಗುತ್ತದೆ. ಮಳೆಗಾಲದಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗುತ್ತದೆ. ಅದಕ್ಕಾಗಿ ಮೊದಲೇ ಸಿದ್ದತೆ ಮಾಡಿಕೊಳ್ಳಬೇಕಿದೆ. ಪ್ರತಿ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಸಿದ್ದಗೊಳಿಸಲಾಗುತ್ತಿದ್ದು, 9ರಂದು ಹೆಚ್ಚಿನ ಮಾಹಿತಿ ನೀಡಲಿದ್ದೇವೆ ಎಂದರು.
ಪುರಸಭೆಯ ಸದಸ್ಯ ಡಿ.ಪಿ.ರಾಜೇಶ್ ಪದ್ಮನಾಭ ಮಾತನಾಡಿ ರಕ್ತದಾನ ಶಿಬಿರವ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರ ವರೆಗೆ ನಡೆಯಲಿದೆ. ಸಾರ್ವಜನಿಕರಿಗೆ ಸ್ಪಂದನೆ ದೊರಕುವ ರೀತಿಯಲ್ಲಿ ತುರ್ತು ನಿರ್ವಹಣಾ ಘಟಕದ ಮೂಲಕ ಕೆಲಸ ನಿರ್ವಹಿಸಲು ಕಾರ್ಯಪಡೆ ಸಿದ್ದಗೊಳಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡುವಂತೆ ಮನವಿ ಮಾಡಿದರು.
ಪುರಸಭೆಯ ಸದಸ್ಯ ಮಹಮದ್ ರಾಫಿ ಮಾತನಾಡಿ ಮಳೆಗಾಲದ ತುರ್ತುಸ್ಥಿತಿ ನಿರ್ವಹಣೆಯು ಸರ್ವರ ಜವಾಬ್ದಾರಿಯಾಗಿದ್ದು. ಶಾಸಕರ ನೇತೃತ್ವದಲ್ಲಿ ಕಾರ್ಯಪಡೆಯನ್ನು ಸಿದ್ದಗೊಳಿಸಲಾಗಿದ್ದು ನಗರ ಮತ್ತು ಇತರ ಸ್ಥಳಗಳಲ್ಲಿ ಮಳೆಯಿಂದ ಅನಾಹುತಗಳು ಸಂಭವಿಸಿದಲ್ಲಿ ಸಂಪರ್ಕಿಸಬಹುದು. ಶಾಸಕರ ಕಛೇರಿಯಲ್ಲಿ ತುರ್ತು ಪರಿಸ್ಥಿತಿ ಎದುರಿಸಲು ಸಹಾಯ ವಾಣಿಯನ್ನು ಕೆಲವೇ ದಿನಗಳಲ್ಲಿ ನಾಡಿನ ಜನತೆಗೆ ತಿಳಿಯಪಡಿಸಲಾಗುತ್ತದೆ. ಸಾಮಾಜಿಕ ಜಾಲಾತಾಣದ ಮೂಲಕ ಈಗಾಗಲೆ ಪ್ರಚಾರಪಡಿಸಲಾಗುತ್ತಿದೆ. ಇದು ರಾಜಕೀಯ ರಹೀತವಾಗಿದ್ದು ಜನಹಿತಕ್ಕಾಗಿ ಕಾರ್ಯಪಡೆ ಸಿದ್ದಗೊಳಿಸಲಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪುರಸಭೆ ಸದಸ್ಯರಾದ ಹೆಚ್.ಎಸ್. ಮತೀನ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಶಶಿಧರನ್, ನಗರ ಸಂಘಟನಾ ಕಾರ್ಯಧರ್ಶಿ ಶಾನ್, ಉಪಧ್ಯಕ್ಷ ಹಮೀದ್, ಮತ್ತಿತರರು ಹಾಜರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*