ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದಲ್ಲಿರುವ ಗೋಮಾಳ ಮತ್ತು ಅಯ್ಯಪ್ಪ ದೇವರ ಬನಬನದ ಜಾಗವನ್ನು ಖಾಸಗಿ ಸಂಸ್ಥೆಯೊಂದು ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿರುವ ಕರವಲೆ ಭಗವತಿ ಮಹಿಷ ಮರ್ಧಿನಿ ದೇವಾಲಯ ಸಮಿತಿ ಹಾಗೂ ಗ್ರಾಮದ ಪ್ರಮುಖರು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿ ಸದಸ್ಯ ಎಂ.ಬಿ.ದೇವಯ್ಯ, ಗೋಮಾಳದ ಜಾಗ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಭಾಗದಲ್ಲಿ ಬೆಟ್ಟಗುಡ್ಡವನ್ನು ಸಮತಟ್ಟು ಮಾಡಿ ಅರಣ್ಯವನ್ನು ನಾಶ ಮಾಡಲಾಗಿದ್ದು, ಸುಮಾರು 6 ಏಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಗೋಮಾಳದ ಸುತ್ತಲು ಇದ್ದ ರಾಜಕಡಂಗ(ಅರಮನೆ ಕಡಂಗ)ವನ್ನು ಮಣ್ಣು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದಾರೆ. ಗೋಮಾಳದಲ್ಲಿ ನೂತನವಾಗಿ ಗೋಶಾಲೆ ನಿರ್ಮಾಣ ಮಾಡಲಾಗಿದ್ದು, ಗೋವುಗಳನ್ನು ಮೇಯಲು ಬಿಡಲಾಗುತ್ತಿತ್ತು. ಆದರೆ, ಅತಿಕ್ರಮಣದಿಂದ ಕಾಡುಮರಗಳು ನಾಶವಾಗಿವೆ. ಒತ್ತುವರಿಯಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಸಂಶಯ ವ್ಯಕ್ತಪಡಿಸಿದರು.
ಗೋಮಾಳ ಜಾಗಕ್ಕೆ ಖಾಸಗಿ ಸಂಸ್ಥೆಯವರು ಬಾರದಂತೆ ತಡೆಯಬೇಕು. ಕಡಂಗದ ಮಣ್ಣನ್ನು ತೆರವುಗೊಳಿಸಿ ಅವರ ಜಾಗಕ್ಕೆ ಮಾತ್ರ ತಂತಿ ಬೇಲಿ ನಿರ್ಮಾಣ ಮಾಡಿಕೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ದೇವಯ್ಯ ಒತ್ತಾಯಿಸಿದರು.
ಗ್ರಾಮಸ್ಥರಾದ ಮುದ್ದಂಡ ರಾಯ್ ತಮ್ಮಯ್ಯ ಮಾತನಾಡಿ, ಮಡಿಕೇರಿಯಲ್ಲಿ ಗೋಮಾಳ ಜಾಗ ಕಡಿಮೆ ಇದ್ದು, ಇರುವ ಜಾಗವನ್ನು ರಕ್ಷಿಸಬೇಕಾಗಿದೆ. ಸರ್ಕಾರಿ ಜಾಗವನ್ನು ಯಾವುದೇ ಅನುಮತಿ ಇಲ್ಲದೇ ವಶಪಡಿಸಿಕೊಳ್ಳಲಾಗಿದ್ದು, ಕಂದಾಯ ಇಲಾಖೆ, ಜಿಲ್ಲಾಡಳಿತ, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗ್ರಾಮಸ್ಥರಾದ ತೆಕ್ಕಡ ಪ್ರಸನ್ನ ಪಳಂಗಪ್ಪ ಮಾತನಾಡಿ, ಇದೇ ಜಾಗದಲ್ಲಿ ಬೇಟೆ ಅಯ್ಯಪ್ಪ ದೇವಾಲಯ ಇದ್ದು, ಅದರ ಆವರಣವನ್ನು ಕೆಡವಲಾಗಿದೆ, ಅಲ್ಲದೆ ಅಲ್ಲಿದ್ದ ಸಾಕಷ್ಟು ಮರಗಳನ್ನು ನಾಶಪಡಿಸಲಾಗಿದೆ. ಜಿಲ್ಲಾಡಳಿತ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ತೆಕ್ಕಡ ಸಂತು ಕಾರ್ಯಪ್ಪ, ಕಾರ್ಯದರ್ಶಿ ಶರಣು ಅಯ್ಯಪ್ಪ ಹಾಗೂ ದೇವತಕ್ಕರಾದ ಪಾಂಡೀರ ಕರುಂಬಯ್ಯ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*