ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು.
ತಮ್ಮ ಕಾರ್ಯಾವಧಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯ-ವಿಚಾರಗಳ ಚರ್ಚೆಯಲ್ಲಿ ಸದನದ ಸರ್ವಸದಸ್ಯರು ಹೆಚ್ಚು ಪಾಲ್ಗೊಳ್ಳುವಂತಾಗಲಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.