ಮಡಿಕೇರಿ ಜು.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜು.12 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜು.17 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Breaking News
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*