ಮಡಿಕೇರಿ ಜು.6 : ಕೊಡಗು ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯದ ಜವಾಹರ ನವೋದಯ ವಿದ್ಯಾಲಯದ 2023 ನೇ ಸಾಲಿನ ಸಿಬಿಎಸ್‍ಇ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, 10 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಉತ್ತೀರ್ಣರಾಗಿದ್ದಾರೆ ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಫಲಿತಾಂಶದಲ್ಲಿ ವಿದ್ಯಾಲಯವು ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಮುನ್ನಡೆ ಸಾಧಿಸಿದೆ. ಹನ್ನೆರಡನೇ ತರಗತಿಯಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಎಸ್.ಯು.ಸಾತ್ವಿಕ ಶೇ.94.4(ಪ್ರಥಮ), ಎಸ್.ಪಿ.ವೈಶಿಣಿ ಶೇ.90.8 (ದ್ವಿತೀಯ), ಬಿ.ಎಚ್.ಸಾಕ್ಷಿ ಶೇ.90(ತೃತೀಯ) ಸ್ಥಾನ ಪಡೆದಿದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಬಿ.ಜಿ.ದುರ್ಗೇಶ್ ಶೇ.95.4(ಪ್ರಥಮ), ಎಚ್.ಪಿ.ರಕ್ಷಯ ಶೇ.94 (ದ್ವಿತೀಯ), ಎಂ.ಕಾವೇರಿ ಶೇ.90 (ತೃತೀಯ) ಸ್ಥಾನ ಪಡೆದಿದ್ದಾರೆ.
ಹತ್ತನೇ ತರಗತಿಯಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 68 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 39 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕೆ.ಜೆ.ನಿಧಿ ಶೇ.97 (ಪ್ರಥಮ), ಎಸ್.ಪ್ರತೀಕ್ಷಾ ಶೇ.94.8 (ದ್ವಿತೀಯ) ಎಂ.ಎ.ರಿಶಿಕಾ ಶೇ.92.8 (ತೃತೀಯ) ಸ್ಥಾನ ಪಡೆದಿದ್ದಾರೆ.
12 ನೇ ತರಗತಿ ವಾಣಿಜ್ಯ ವಿಭಾಗದ ಶೀಘ್ರಲಿಪಿ ವಿಷಯದಲ್ಲಿ 6 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದು ಗಣನೀಯ ಸಾಧನೆ ಮಾಡಿದ್ದಾರೆ. ಅಲ್ಲದೇ ವಿಷಯ ಸರಾಸರಿಯಲ್ಲಿ ವಿದ್ಯಾಲಯವು ದೇಶದಲ್ಲೇ ಮೊದಲ ಸ್ಥಾನ ಪಡೆದು ವಿದ್ಯಾಲಯದ ಹೆಸರನ್ನು ಉತ್ತುಂಗಕ್ಕೇರಿಸಿದ್ದಾರೆ. ಉನ್ನತ ಸಾಧನೆ ಮಾಡಿದ ಮತ್ತು ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು, ಹೆಚ್ಚಿನ ಅಂಕ ಪಡೆದು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯರು, ಶಿಕ್ಷಕರು, ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
Breaking News
- *ವಾರ ಭವಿಷ್ಯ: ನ.25 ರಿಂದ ನ.30ರ ವರೆಗಿನ ಆರುದಿನಗಳು ಹೇಗಿರಲಿದೆ…?
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*