Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಹೆದ್ದಾರಿಗಳಲ್ಲಿ ‘ಸೈನ್‍ಬೋರ್ಡ್’ ಆದ್ಯತೆ ಮೇಲೆ ಅಳವಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಹೆದ್ದಾರಿಗಳಲ್ಲಿ ‘ಸೈನ್‍ಬೋರ್ಡ್’ ಆದ್ಯತೆ ಮೇಲೆ ಅಳವಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಜುಲೈ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತಗಳನ್ನು ತಡೆಯಲು ಅಗತ್ಯ ಇರುವ ಕಡೆಗಳಲ್ಲಿ ‘ಸೈನ್‍ಬೋರ್ಡ್’ (ಸೂಚನಾ ಫಲಕ) ಅಳವಡಿಸುವಂತೆ ಸಂಬಂಧಪಟ್ಟ ವಿಭಾಗದ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.
ಕೊಡಗು ಜಿಲ್ಲೆಗೆ ರಾಜ್ಯ, ಅಂತರ ರಾಜ್ಯಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸ್ಥಳೀಯರು ಸೇರಿದಂತೆ ಯಾರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ. ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಅಪಘಾತ ತಡೆಯುವಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು.
ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೈನ್ ಬೋರ್ಡ್ ಅಳವಡಿಸುವ ಸಂಬಂಧ ಪೊಲೀಸ್ ಇಲಾಖೆಯಿಂದ ಸ್ಥಳದ ಮಾಹಿತಿ ಪಟ್ಟಿ ಪಡೆದು ಕೂಡಲೇ ಸೈನ್‍ಬೋರ್ಡ್‍ನ್ನು ಆದ್ಯತೆ ಮೇಲೆ ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಈಗಾಗಲೇ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮಳೆ ಜೊತೆಗೆ ಮಂಜು ಆವರಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಸೈನ್‍ಬೋರ್ಡ್ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ನಿರ್ಮಾಣ ಅತ್ಯವಶ್ಯಕವಾಗಿದ್ದು, ಈ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಶಾಲನಗರದಿಂದ ಸಂಪಾಜೆ ವರೆಗೆ ಅಷ್ಟಾಗಿ ಸೂಚನಾ ಫಲಕಗಳು ಇಲ್ಲ. ಆದ್ದರಿಂದ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು ಎಂದು ಹೇಳಿದರು.
‘ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗಿಡಗಂಟೆಗಳನ್ನು ಕಡಿದು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಕೆ.ರಾಮರಾಜನ್ ಅವರು ಸಲಹೆ ಮಾಡಿದರು.’
ಅಪಘಾತ ವಲಯಗಳನ್ನು ಗುರುತಿಸಿ ಸೈನ್‍ಬೋರ್ಡ್ ಇಲ್ಲದ ಕಡೆ ಸೈನ್‍ಬೋರ್ಡ್ ಅಳವಡಿಸಬೇಕು. ಶಾಲಾ- ಕಾಲೇಜು ವ್ಯಾಪ್ತಿಯಲ್ಲಿ ಸಂಚಾರಿ ಮಾರ್ಗದ ವಿವರ ಮಾಹಿತಿ ಫಲಕ ಅಳವಡಿಸುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಸಂಚಾರಕ್ಕೆ ಸೈನ್ ಬೋರ್ಡ್ ಅಳವಡಿಸುವುದು, ಜೀಬ್ರಾ ಕ್ರಾಸ್ ಬರೆಸುವುದು, ರೈಲಿಂಗ್ಸ್ ಮತ್ತಿತರ ಕೆಲಸಗಳು ಆಗಬೇಕಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಜಿ.ಪಂ. ಇಇ ಸುರೇಶ್ ಕುಮಾರ್, ಹೆದ್ದಾರಿ ವಿಭಾಗದ ಸಹಾಯಕ ಎಂಜಿನಿಯರ್ ಹನುಮಂತ ಅವರು ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದ ಮುಖ್ಯಸ್ಥರಾದ ಜಯಕರ ಶೆಟ್ಟಿ ಅವರು ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಬಸ್‍ಗಳಿಗೆ ವೇಗದ ಮಿತಿ ಅಳವಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ, ಕಾರ್ಮಿಕ ಇಲಾಖಾ ಅಧಿಕಾರಿ ಹರ್ಷವರ್ಧನ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.