ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಇಂದು ಪರಿಶೀಲಿಸಿದರು.
ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದ ಬಿ ಕೆ ಚಂದಪ್ಪ ಎಂಬುವವರ ವಾಸದ ಮನೆಯ ಎರಡು ಗೋಡೆಗಳು ಕುಸಿದು ಹಾನಿಯಾಗಿದೆ. ಈ ಸಂಬಂಧ ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿದರು.
Breaking News
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*
- *ಸೋಮವಾರಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*