ಸೋಮವಾರಪೇಟೆ ಜು.7 : ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಸಪ್ತಾಹ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮನೋವೈದ್ಯರಾದ ಡಾ.ಡೆವಿನ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬಾರದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ದುಶ್ಚಟಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಂಡರೆ ಇಡೀ ಬದುಕು ನರಕವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದರು.
ಮನಶಾಸ್ತ್ರಜ್ಞ ಮೋಹನ್, ಮುಖ್ಯ ಶಿಕ್ಷಕ ಯಶ್‍ವಂತ್‍ಕುಮಾರ್, ಸಹ ಶಿಕ್ಷಕರು ಇದ್ದರು.
ಇದೇ ಸಂದರ್ಭ ಟೆಲಿಮನಸ್ ಎಂಬ ವಿನೂತನ ಯೋಜನೆಯ ಟೋಲ್ ಫ್ರೀ ನಂಬರ್ ಇರುವ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ತಡೆಗಟ್ಟುವಲ್ಲಿ ಯುವ ಜನರ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.









