ಮಡಿಕೇರಿ ಜು.7 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಸಮನ್ವಯ ಸಮಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಿಶೇಷ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಕುಶಾಲನಗರದ ಶಕ್ತಿಧಾಮ ಮದ್ಯ ವ್ಯಸನಿಗಳ ಸಮಗ್ರ ಪುನಶ್ಚೇತನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಬಗ್ಗೆ ಇಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾರ್ಯಾಗಾರ ನಡೆಯಿತು.
ನಗರದ ಜಿಲ್ಲಾ ಪೊಲೀಸ್ ಕಚೇರಿಯ ಕಿರು ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮನೋವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ಶೈಲಶ್ರೀ ಹಾಗೂ ಕುಶಾಲನಗರದ ಶಕ್ತಿಧಾಮ ಪುನರ್ ವಸತಿ ಕೇಂದ್ರದ ಯೋಜನಾ ಸಂಯೋಜಕ ಕೆ.ಒ.ಪ್ರಭು ಮಾದಕ ವಸ್ತುಗಳ ವ್ಯಸನ ಹಾಗೂ ಅವುಗಳಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು ಮತ್ತು ಮದ್ಯ ವ್ಯಸನಿಗಳ ಪುನರ್ ವಸತಿಯ ಬಗ್ಗೆ ಮಾತನಾಡಿದರು.
ಈ ಸಂದರ್ಭ ಅಪರ ಜಿಲ್ಲಾ ವರಿಷ್ಠಾಧಿಕಾರಿ ಕೆ.ಎಸ್.ಸುಂದರ ರಾಜ್, ಜಿಲ್ಲಾ ವಿಕಲ ಚೇತನ ಕಲ್ಯಾಣ ಇಲಾಖೆಯ ಅಧಿಕಾರಿ ವಿಮಲ, ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.