ಮಡಿಕೇರಿ ಜು.7 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಪ್ರತಿ ಪಂಚಾಯತಿಗಳ ನೋಟಿಸ್ ಬೋರ್ಡ್‍ನಲ್ಲಿ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಪ್ರಕರಣಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಸಮಿತಿ ಸದಸ್ಯರಾದ ಮುತ್ತಪ್ಪ ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೆಮ್ಮನೆ ಗ್ರಾಮದಲ್ಲಿ ಸರ್ವೆ ನಂ. 999/39 ಬೀ ಪರಿಶಿಷ್ಟ ಜಾತಿ ಕುಟುಂಬಗಳಿಗೆ 25 ಸೆಂಟ್ ಜಾಗವನ್ನು ಘೋಷಣೆ ಮಾಡಿತ್ತು, ಆದರೆ ಈ ಗ್ರಾಮದಲ್ಲಿ 3 ತಿಂಗಳು ಕಳೆದರೂ ಸರ್ವೆ ಕಾರ್ಯ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು,
ಜಿಲ್ಲಾಧಿಕಾರಿ ಅವರು ಸರ್ವೆ ಕಾರ್ಯ ಯಾಕೆ ಪ್ರಾರಂಭ ಆಗಿಲ್ಲ, ಸೋಮವಾರದೊಳಗೆ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಹೇಳಿದರು.
ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಹಲವು ಜನರು ಮನೆಗಳನ್ನು ಕಳೆದುಕೊಂಡಿದ್ದರು, ಅವರಿಗೆ ಮನೆ ನೀಡುಂತಾಗಬೇಕು ಎಂದರು.
ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಸರ್ವೆ ನಂಬರ್ 512/1 ರಲ್ಲಿ 0.35 ಪೈಸಾರಿ ಜಾಗವನ್ನು ಅಂಬೇಡ್ಕರ್ ಭವನಕ್ಕೆ ಗುರುತಿಸಲಾಗಿದ್ದು, ಅದರ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪೌರ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರಕ್ಕೆ ನೀಡುವಂತಹ 30 ರೂ. ಹಣವನ್ನು 50 ರೂಪಾಯಿಗಳಿಗೆ ಏರಿಕೆ ಮಾಡಿ ಗುಣಮಟ್ಟದ ಆಹಾರವನ್ನು ನೀಡುವಂತೆ ಹೇಳಿದರು.
ನಗರಸಭೆ ಪೌರಾಯುಕ್ತ ವಿಜಯ ಮಾತನಾಡಿ, ಪೌರ ಕಾರ್ಮಿಕರಿಗೆ ಬೆಳಗ್ಗಿನ ತಿಂಡಿಯನ್ನು ಉತ್ತಮ ಗುಣಮಟ್ಟದಲ್ಲಿ ನೀಡಲಾಗುತ್ತಿದೆ ಎಂದರು.
ಎಸ್‍ಸಿ ಮತ್ತು ಎಸ್‍ಟಿ ಮಕ್ಕಳಿಗೆ ನೀಡುವಂತಹ ಪುಸ್ತಕ ಹಾಗೂ ಸ್ಕಾಲರ್ ಶಿಪ್ ಅನ್ನು ಪಂಚಾಯತಿ ಮಟ್ಟದಲ್ಲಿ ನೀಡುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಡಿಗ್ರಿ ಹಂತದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮುಖಾಂತರ ಅರ್ಜಿ ಪಡೆದು ನೇರವಾಗಿ ಅವರ ಖಾತೆಗೆ ಹಣ ಹಾಗೂ ಲ್ಯಾಪ್‍ಟಾಪ್, ಟ್ಯಾಬ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸಮಿತಿ ಸದಸ್ಯರಾದ ಪಿ.ಪಿ.ಸುಕುಮಾರ್, ಜಾಯ್ಸ್ ಮೆನೇಜಸ್, ಜಿ.ಪಂ. ಯೋಜನಾ ನಿರ್ದೇಶಕರಾದ ಜಗದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಡಿಡಿಪಿಐ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ವಿಜಯ, ತಹಶೀಲ್ದಾರರಾದ ಎಸ್.ಎನ್.ನರಗುಂದ, ಬಿಸಿಎಂ ಅಧಿಕಾರಿ ಮಂಜುನಾಥ್ ಇತರರು ಇದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*