ನಾಪೋಕ್ಲು ಜು.8 : ನಾಪೋಕ್ಲು-ಮಡಿಕೇರಿ ಕಡೆ ತೆರಳುವ ಮುಖ್ಯರಸ್ತೆಯ ಪಾಲೂರು ಗ್ರಾಮ ತೆರಳಿ ಮಡಿಕೇರಿಯ ಮುಖ್ಯ ರಸ್ತೆಯ ಮಧ್ಯ ತಿರುವುವಿನಲ್ಲಿ ಭಾರೀ ಗಾತ್ರದ ಗುಂಡಿ ನಿರ್ಮಾಣವಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಹಿಂದೆ ಗುಂಡಿ ಮುಚ್ಚುವ ಕಾರ್ಯವನ್ನು ಸಮರ್ಪಕವಾಗಿ ಮಾಡದೆ ಇರುವುದರಿಂದಾಗಿ ಇದು ಹಲವುರು ತಿಂಗಳಿನಿಂದ ಹಾಗೆ ಇದ್ದು ಸಂಬಂಧಪಟ್ಟವರು ಗಮನ ಹರಿಸಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಇಲಾಖಾಧಿಕಾರಿಗಳು ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಗಮನ ಹರಿಸಿ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಬೇಕಿದೆ. ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವರದಿ : ದುಗ್ಗಳ ಸದಾನಂದ