ಮಡಿಕೇರಿ ಜು.8 : ಮಡಿಕೇರಿ ನಗರಸಭಾ ಸದಸ್ಯ ಅಪ್ಪಣ್ಣ ಅವರ ಮೇಲೆ ಗುಂಪು ಹಲ್ಲೆ ಮಾಡಿರುವ ಕ್ರಮವನ್ನು ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊಡವಾಮೆರ ಕೊಂಡಾಟ ಸಂಘಟನೆ ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಒಬ್ಬ ನಗರಸಭಾ ಸದಸ್ಯನ ಮೇಲೆ ತನ್ನ ವಾರ್ಡ್ ವ್ಯಾಪ್ತಿಯಲ್ಲಿ ರಕ್ಷಣೆ ಇಲ್ಲದೆ ಹೋದರೆ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಸಂಘಟನೆಯ ಪ್ರಮುಖರು ಮುಂದಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಗಳೇ ಬೇರೆ ಬೇರೆ ಆಯಾಮಗಳಿಗೆ ತಿರುವು ಪಡೆದುಕೊಂಡು, ಜಿಲ್ಲೆಯಲ್ಲಿ ಗೊಂದಲ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವುದನ್ನು ತಡೆಯಬೇಕಾದರೆ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.