ಮಡಿಕೇರಿ ಜು.8 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಆರ್.ದಿನೇಶ್ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಅವರು ದಿನೇಶ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಪಕ್ಷ ಸಂಘಟನೆಯೊಂದಿಗೆ ಜಿಲ್ಲೆಯ ಕಾರ್ಮಿಕ ವರ್ಗದ ಕುಂದು ಕೊರತೆಗಳನ್ನು ಅವಲೋಕಿಸಿ ಪಕ್ಷ ಮತ್ತು ಸರ್ಕಾರದ ಗಮನ ಸೆಳೆಯುವುದಾಗಿ ದಿನೇಶ್ ತಿಳಿಸಿದ್ದಾರೆ.









