ಮಡಿಕೇರಿ ಜು.8 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ನಗರಸಭೆಯ ಎಸ್‍ಡಿಪಿಐ ಸದಸ್ಯರುಗಳಾದ ಅಮೀನ್ ಮೊಹಿಸಿನ್, ಮನ್ಸೂರ್, ಬಶೀರ್ ಅಹಮ್ಮದ್, ಮೇರಿ ವೇಗಸ್ ಹಾಗೂ ನೀಮಾ ಅರ್ಷಾದ್ ತೀವ್ರವಾಗಿ ಖಂಡಿಸಿದ್ದಾರೆ.
ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರನ್ನು ಕ್ಷುಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವುದು ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ನಗರದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕೆ ಹೊರತು ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ನಗರಸಭಾ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಎಸ್‍ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ.









