ಮಡಿಕೇರಿ ಜು.8 : ಸುಂಟಿಕೊಪ್ಪ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೇರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಕೃಷಿ ಫಸಲನ್ನು ನಾಶ ಮಾಡಿದೆ.
ಸ್ಥಳೀಯ ಕೃಷಿಕ ಅರುಣ್ ಚೆಂಗಪ್ಪ ಎಂಬುವವರ ತೋಟಕ್ಕೆ ನಿತ್ಯ ಆನೆಗಳು ಲಗ್ಗೆ ಇಡುತ್ತಿದ್ದು, ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ನೆಲಸಮ ಮಾಡಿವೆ. ಕೈಗೆ ಬಂದ ತ್ತುತ್ತು ಬಾಯಿಗೆ ಬರಲಿಲ್ಲ ಎನ್ನುವ ರೀತಿಯಲ್ಲಿ ಕೃಷಿ ಫಸಲನ್ನು ತಿಂದು ತೇಗುತ್ತಿವೆ. ಒಂದೆಡೆ ಪ್ರಾಕೃತಿಕ ಅಸಮಾತೋಲನ, ಮತ್ತೊಂದೆಡೆ ವನ್ಯಜೀವಿಗಳ ದಾಳಿಯಿಂದ ಅಪಾರ ನಷ್ಟವಾಗುತ್ತಿದೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಡಾನೆಗಳು ತೋಟಗಳು ಮಾತ್ರವಲ್ಲದೆ ಮನೆ ಬಾಗಲಿಗೆ ಬರುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಆತಂಕದಿಂದಲೇ ಸಂಚರಿಸಬೇಕಾದ ಅನಿವಾರ್ಯತೆ ಇದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ. ವಿಶೇಷ ಆಸಕ್ತಿ ತೋರಿ ಹೇರೂರು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕು ಮತ್ತು ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*