ಸೋಮವಾರಪೇಟೆ ಜು.8 : ಶಾಂತಳ್ಳಿ ಹೋಬಳಿಯ ತಲ್ತಾರೆಶೆಟ್ಟಳ್ಳಿ ಗ್ರಾಮದ ಸುಗ್ಗಿದೇವರಬನ ದೇವರಕಾಡು ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಸಾಗುವಳಿ ಮಾಡಿದ್ದ ಜಾಗವನ್ನು ಅರಣ್ಯ ಇಲಾಖೆ ತೆರವುಗೊಳಿಸಿ ಇಲಾಖಾ ಸುಪರ್ದಿಗೆ ಪಡೆದುಕೊಂಡಿದೆ.
ಸೋಮವಾರಪೇಟೆ ಅರಣ್ಯ ಇಲಾಖೆಯಲ್ಲಿ ಒತ್ತುವರಿ ಪ್ರಕರಣ ದಾಖಲಾಗಿತ್ತು. ಸೋಮವಾರಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಒತ್ತುವರಿ ಜಾಗವನ್ನು ತೆರವುಗೊಳಿಸಲು ಆದೇಶ ನೀಡಿದ್ದರು. ಒತ್ತುವರಿದಾರರು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರಿ ಕೊಡಗು ವೃತ್ತದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸೋಮವಾರಪೇಟೆ ಉಪ ವಿಭಾಗದ 16.7.2018ರ ಆದೇಶವನ್ನು ಎತ್ತಿಹಿಡಿದ ಮೇಲ್ಮನವಿ ಪ್ರಾಧಿಕಾರ, 10.2.2023ರಲ್ಲಿ ಒತ್ತುವರಿದಾರರ ಮೇಲ್ಮನವಿಯನ್ನು ವಜಾಗೊಳಿಸಿ, 30 ದಿನಗಳ ಒಳಗೆ ಒತುವರಿ ತೆರವುಗೊಳಿಸಿ, ಅರಣ್ಯ ಇಲಾಖೆಯ ಸುಪರ್ದಿಗೆ ಪಡೆದುಕೊಳ್ಳಲು ಆದೇಶಿಸಿತ್ತು.
ಹಿರಿಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಕಾಫಿ, ಕಿತ್ತಳೆ ಇನ್ನಿತರ ವಾಣಿಜ್ಯ ಬೆಳೆಗಳನ್ನು ತೆರವುಗೊಳಿಸಿ, ಹಿಟಾಚಿ ಯಂತ್ರದ ಮೂಲಕ ಜಾನುವಾರು ನಿರೋಧಕ ಕಂದಕ ತೋಡಿ, ಪೂರ್ಣ ಪ್ರಮಾಣದಲ್ಲಿ ಇಲಾಖೆಯ ವಶಕ್ಕೆ ಪಡೆದುಕೊಂಡಿದ್ದಾರೆ.
ಒತ್ತುವರಿ ತೆರವುಗೊಳಿಸುವ ಸಂದರ್ಭ ಎಸಿಎಫ್ ಎ.ಎ. ಗೋಪಾಲ್, ಆರ್‍ಎಫ್‍ಒ ಚೇತನ್, ಡಿಆರ್‍ಎಫ್‍ಒ ಸತೀಶ್, ಅರಣ್ಯ ಪಾಲಕರಾದ ಕಿರಣ್, ವಿಶ್ವ, ಕರಿಮಲ್ಲಪ್ಪ, ಪೊಲೀಸರು, ದೇವರಕಾಡು ಸಂರಕ್ಷಣ ಸಮಿತಿ ಅಧ್ಯಕ್ಷರು, ಗ್ರಾಮಸ್ಥರು ಇದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*