ಮಡಿಕೇರಿ ಜು.9 : ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಬು ಕಾಡಿನ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಸುಮಾರು 20 ಲಕ್ಷ ರೂ.ಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಯೋಜನೆಯಿಂದ 80ಕ್ಕೂ ಹೆಚ್ಚು ಕುಟುಂಬಗಳಿಗೆ ಮುಖ್ಯ ರಸ್ತೆಯ ಸಂಪರ್ಕ ದೊರೆಯಲಿದೆ. ಗಿರಿಜನ ಹಾಡಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ, ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಗ್ರಾ.ಪಂ ಸದಸ್ಯರಾದ ಚುಬ್ರು, ಅಫ್ರೊಜ್, ಜಿ.ಪಂ ಮಾಜಿ ಸದಸ್ಯರಾದ ಪೃಥ್ವಿ, ಪಂಕಜ, ಸಹಕಾರ ಬ್ಯಾಂಕ್ ನ ಅಧ್ಯಕ್ಷ ಚಪ್ಪುಡಿರ ರಾಮಕೃಷ್ಣ, ಡಿಸಿಸಿ ಸದಸ್ಯ ವಿನಯ್ ಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*