ವಿರಾಜಪೇಟೆ ಜು.10 : ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಬಿಎ ವಿಭಾಗದ ವಿದ್ಯಾರ್ಥಿಗಳು ಮೈಸೂರು ಬನ್ನಿಮಂಟಪದಲ್ಲಿರುವ ಜೆ.ಎಸ್.ಎಸ್. ಕಾಲೇಜ್ ಆಫ್ ಹೈಯರ್ ಎಜುಕೇಶನ್ ಅಕಾಡೆಮಿ ಆಂಡ್ ರಿಸರ್ಚ್ ವಿಭಾಗಕ್ಕೆ ಭೇಟಿ ನೀಡಿ ಉದ್ಯಮಶೀಲತೆಯ ಬಗ್ಗೆ ತಿಳಿದುಕೊಂಡರು.
ಇದೊಂದು ಶೈಕ್ಷಣಿಕ ಭೇಟಿಯಾಗಿದು,್ದ ವಿದ್ಯಾರ್ಥಿಗಳಿಗೆ ಜೆ.ಎಸ್.ಎಸ್. ಸಂಸ್ಥೆಯ ವೃಕ್ಷ ಘಟಕದ ನಿರ್ದೇಶಕರು ಹಾಗೂ ವ್ಯವಸ್ಥಾಪಕ ರಾದ ಗಿರೀಶ್, ಉದ್ಯಮಶೀಲತೆಯ ಮಾರ್ಗಗಳನ್ನು ಉದಾಹರಣೆ ಸಮೇತ ವಿವರಿಸಿದರು. ಉದ್ಯಮಶೀಲತೆ ಎಂಬುವುದು ಸ್ವಂತ ವ್ಯವಹಾರ ದೃಷ್ಟಿಕೋನವನ್ನು ಬೆಳೆಸಿಕೊಂಡರೆ ಮಾತ್ರ ಸಾಧ್ಯ, ವಿದ್ಯಾರ್ಥಿಗಳು ಈ ಹಂತದಿಂದಲೇ ಉದ್ಯಮದ ಸ್ಥಾಪನಾ ವಿಧಾನವನ್ನು ಅರಿಯಬೇಕೆಂದರು. ಸ್ವಂತ ಉದ್ಯಮಿ ಆಗಲು ಇಂದು ಹಲವು ಅವಕಾಶಗಳಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಂಶೋಧನೆಯತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ಅಭಿವೃದ್ಧಿಶೀಲ ಭಾರತಕ್ಕೆ ಉದ್ಯಮ ಘಟಕದ ಪಾತ್ರ ಅಪಾರವಾಗಿದೆ ಎಂದರು.
ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಶ್ನೆಗಳನ್ನು ಕೇಳುವುದರ ಮೂಲಕ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು. ವಿದ್ಯಾರ್ಥಿಗಳು ಫಾರ್ಮಸಿ ವಿಭಾಗಕ್ಕೂ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜೆ.ಎಸ್.ಎಸ್. ಅಕಾಡೆಮಿಯ ಹರ್ಷಿತ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಶಾಂತಿಭೂಷಣ್, ಅಂತಿಮ ಪದವಿ ಬಿಬಿಎ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*