ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಬಿಸಿಲಿನ ವಾತಾವರಣ ಕಂಡು ಬಂದಿತ್ತು.
ಮುಂದಿನ 2-3 ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಅದರ ನಂತರ, 2023 ರ ಜು.13 ರಿಂದ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 818.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1281.69 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.65 ಮಿ.ಮೀ. ಕಳೆದ ವರ್ಷ ಇದೇ ದಿನ 134.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1273.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1882.88 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.73 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 68.78 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 596.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1010.22 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 90.70 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 585.52 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 951.97 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ : ಮಡಿಕೇರಿ ಕಸಬಾ 17.20, ನಾಪೋಕ್ಲು 1.40, ಸಂಪಾಜೆ 62, ಭಾಗಮಂಡಲ 6, ವಿರಾಜಪೇಟೆ ಕಸಬಾ 3.60, ಹುದಿಕೇರಿ 3.30, ಶ್ರೀಮಂಗಲ 2, ಪೊನ್ನಂಪೇಟೆ 1, ಬಾಳೆಲೆ 0.50, ಸೋಮವಾರಪೇಟೆ ಕಸಬಾ 6.80, ಶನಿವಾರಸಂತೆ 4, ಶಾಂತಳ್ಳಿ 12, ಕೊಡ್ಲಿಪೇಟೆ 4.20, ಕುಶಾಲನಗರ 0.60, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2838.40 ಅಡಿಗಳು. ಕಳೆದ ವರ್ಷ ಇದೇ ದಿನ 2854.85 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.20 ಮಿ.ಮೀ., ಕಳೆದ ವರ್ಷ ಇದೇ ದಿನ 46.40 ಮಿ.ಮೀ. ಇಂದಿನ ನೀರಿನ ಒಳಹರಿವು 2293 ಕ್ಯುಸೆಕ್, ಕಳೆದ ವರ್ಷ ಇದೇ ದಿನ 16017 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 14803 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.