ಬೆಂಗಳೂರು : ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.