ಮಡಿಕೇರಿ ಜು.10 : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 241.4 ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಪಂಚವಳ್ಳಿ ನಿವಾಸಿಗಳಾದ ಸದ್ದಾಂ ಹುಸೇನ್ (35) ಹಾಗೂ ಜಾಬಿಯ ಉಲ್ಲಾಖಾನ್ (40) ಎಂಬುವವರೇ ಬಂಧಿತ ಆರೋಪಿಗಳು.
ಮೂರ್ನಾಡುವಿನಿಂದ-ಕೊಂಡಂಗೇರಿಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಪಿಐ ಯು.ಉಮೇಶ್ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‍ಪಿ ಮನವಿ ಮಾಡಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*