ಮಡಿಕೇರಿ ಜು.10 : ಚಿನ್ನಾಭರಣ ಮಳಿಗೆಯಲ್ಲಿ ನಕಲಿ ಆಭರಣವನ್ನಿಟ್ಟು 22.4 ಗ್ರಾಂ. ತೂಕದ ಅಸಲಿ ಚಿನ್ನಾಭರಣವನ್ನು ಕದ್ದೊಯ್ದ ಚಿತ್ರದುರ್ಗ ಮೂಲದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕುಶಾಲನಗರದ ರಥಬೀದಿಯಲ್ಲಿರುವ ಶೀತಲ್ ಜ್ಯುವೆಲ್ಲರಿಗೆ ಜೂ.5 ರಂದು ಆಗಮಿಸಿದ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಾಗೂ ಒಬ್ಬ ಯುವಕ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಮಳಿಗೆಯ ಸಿಬ್ಬಂದಿಗಳ ಗಮನವನ್ನು ಬೇರೆಡೆ ಸೆಳೆದು, ಅಸಲಿ ಆಭರಣವನ್ನು ಲಪಟಾಯಿಸಿ, ನಕಲಿ ಆಭರಣವನ್ನು ಇಟ್ಟು ವಂಚಿಸಿ ಪರಾರಿಯಾಗಿದ್ದರು.
ಈ ಬಗ್ಗೆ ದೂರು ದಾಖಲಿಸಿಕೊಂಡ ಕುಶಾಲನಗರ ಪೊಲೀಸರು ತನಿಖೆ ಕೈಗೊಂಡು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ಗ್ರಾಮದ ಕೈರುನ್ (46) ಹಾಗೂ ಜೈರಾಭಿ (36) ಎಂಬುವವರನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ಪಿಐ ಬಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.
ಉತ್ತಮವಾಗಿ ಕಾರ್ಯನಿರ್ವಹಿಸಿ ಪ್ರಕರಣವನ್ನು ಭೇದಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಮಾಹಿತಿ ನೀಡಿ : ಯಾವುದೇ ಅನುಮಾನ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಂಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಎಸ್‍ಪಿ ಅವರು ಸಾರ್ವಜನಿಕರಲ್ಲಿ ಕೋರಿದ್ದು, ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*