ವಿರಾಜಪೇಟೆ ಜು.10 : ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅವರು ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಎಸ್ಎಸ್ಎಲ್ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರಿಗೆ ವಿಧಾನ ಪರಿಷತ್ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸಹಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.