ಮಡಿಕೇರಿ ಜು.10 : ನಗರಸಭಾ ಸದಸ್ಯ ಹಾಗೂ ಮಕ್ಕಂದೂರು ಕೊಡವ ಸಮಾಜದ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಮಕ್ಕಂದೂರು ಕೊಡವ ಸಮಾಜ ತೀವ್ರವಾಗಿ ಖಂಡಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ತಂಬುಕುತ್ತೀರ ಮಧು ಮಂದಣ್ಣ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕ್ಷುಲಕ ಕಾರಣಕ್ಕೆ ಜನಪ್ರತಿನಿಧಿಯೊಬ್ಬರನ್ನು ಹಾಡಹಗಲೇ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿರುವುದು ಅಪರಾಧವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು. ಆ ಮೂಲಕ ಅಪ್ಪಣ್ಣ ಅವರಿಗೆ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಮೂಲನಿವಾಸಿಗಳು ಒಗ್ಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಕೊಡಗಿನಲ್ಲಿ ಮೂಲ ನಿವಾಸಿಗಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದ್ದು, ಈ ಬಗ್ಗೆ ಜನಾಂಗ ಬಾಂಧವರು ಗಂಭೀರ ಚಿಂತನೆ ಹರಿಸಬೇಕಾಗಿದೆ ಎಂದು ತಂಬುಕುತ್ತೀರ ಮಧು ಮಂದಣ್ಣ ಇದೇ ಸಂದರ್ಭ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*