ಮಡಿಕೇರಿ ಜು.10 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಮಂಟಪ ಸಭಾಂಗಣದಲ್ಲಿ ನಡೆಯಿತು.
ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು.
ಮುಂದಿನ ದಿನಗಳಲ್ಲಿ ಮೊಗೇರ ಸಮಾಜವನ್ನು ಬಲಿಷ್ಠಗೊಳಿಸಲು ಎಲ್ಲಾ ಗ್ರಾಮದಲ್ಲೂ ಸಮಿತಿ ರಚಿಸುವಂತೆ ಮತ್ತು ಮೊಗೇರ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಕೈಗೊಳ್ಳಬೇಕಾದ ವಿಚಾರದ ಬಗ್ಗೆ ಗಂಭೀರವಾದ ಚರ್ಚೆ ನಡೆಸಲಾಯಿತು.
ಜಿಲ್ಲಾ ಸಮಿತಿ ಮತ್ತು ಎಲ್ಲಾ ತಾಲೂಕು ಸಮಿತಿಯನ್ನು ಪುನರ್ ರಚಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.
ವೇದಿಕೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ, ಗೌರವ ಅಧ್ಯಕ್ಷ ಪಿ.ಎಂ.ರವಿ, ಜಿಲ್ಲಾ ಉಪಾಧ್ಯಕ್ಷ ದೇವಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ಗಣೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್, ಖಜಾಂಚಿ ಮಂಜು ಬರಡಿ, ಉಪಾಧ್ಯಕ್ಷ ಕೃಷ್ಣ ಹಾಜರಿದ್ದರು.
ನೂತನ ಆಡಳಿತ ಮಂಡಳಿ ರಚನೆ : ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷರಾಗಿ ಪಿ.ಬಿ.ಜನಾರ್ಧನ್ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
ಉಪಾಧ್ಯಕ್ಷರಾಗಿ ಬಿ.ಎಂ.ದಾಮೋದರ, ಮಂಜುಬರಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್, ಜಿಲ್ಲಾ ಸಂಘಟನಾ ಸಂಚಾಲಕರಾಗಿ ಎಂ.ಪಿ.ದೇವಪ್ಪ, ಗೌರವಾಧ್ಯಕ್ಷರಾಗಿ ಗೌತಮ್ ಶಿವಪ್ಪ, ಸಲಹೆಗಾರರಾಗಿ ಪಿ.ಎಂ.ರವಿ ಮತ್ತು ಬಿ.ಶಿವಪ್ಪ ನೇಮಕಗೊಂಡರು.
ಸದಸ್ಯರುಗಳಾಗಿ ಪಿ.ಕೆ.ಚಂದ್ರು, ಪಿ.ಬಿ.ವೆಂಕಪ್ಪ, ಚಂದ್ರ, ಗಣೇಶ್, ಸುರೇಶ್ ಕಂಬಿಬಾಣೆ, ರಾಮಚಂದ್ರ, ಮಂಜು, ಜಿ.ಕೃಷ್ಣ, ಸುರೇಶ್ ಮಡಿಕೇರಿ, ರವಿ, ದಿನೇಶ್, ಮಂಜು ಸುಂಟಿಕೊಪ್ಪ, ಜಯಪ್ರಕಾಶ್, ಸೋಮನಾಥ್, ರವಿ ನಾಕೂರು, ರಾಮು ಸಿದ್ದಾಪುರ, ವಸಂತ, ರವಿ ಪಾಲಿಬೆಟ್ಟ, ಜಿನ್ನಪ್ಪ, ತನಿಯಪ್ಪ ಆಯ್ಕೆಯಾದರು.
ಆಯ್ಕೆ ಪ್ರಕ್ರಿಯೆಯನ್ನು ಗೌರವಾಧ್ಯಕ್ಷ ಪಿ.ಎಂ.ರವಿ ಮತ್ತು ಬಿ.ಶಿವಪ್ಪ ನಡೆಸಿಕೊಟ್ಟರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*