ಮಡಿಕೇರಿ ಜು.10 : ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ವಾಹನಗಳು ನಿಯಮಾನುಸಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಾನುಸಾರ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳಡಿಯಲ್ಲಿ ನಿಗದಿಪಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ.
ಶಾಲಾ ವಾಹನಗಳಲ್ಲಿ ಚಾಲ್ತಿಯಲ್ಲಿರುವ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದ್ದು, ವಾಹನದ ನಾಲ್ಕು ಕಡೆಗಳಲ್ಲಿ ಶಾಲೆಯ ಹೆಸರು ಮತ್ತು ದೂರವಾಣಿ ಸಂಖ್ಯೆ ನಮೂದಿಸಿರಬೇಕು. ಚಾಲ್ತಿಯಲ್ಲಿರುವ ಸ್ಪೀಡ್ ಗವರ್ನರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗ್ನಿನಂದಕ ಮತ್ತು ಹ್ಯಾಮರ್ ಹೊಂದಿರಬೇಕು. ರಿಫ್ಲೆಕ್ಟಿವ್ ಟೇಪ್ ಅಳವಡಿಸಿರಬೇಕು. ನಿಗದಿತ ಸಾಮಥ್ರ್ಯಕ್ಕೆ ಮೀರಿ ಮಕ್ಕಳನ್ನು ಕರೆದೊಯ್ಯಬಾರದು. ವಾಹನದಲ್ಲಿ ಒಬ್ಬರು ಸಹಾಯಕರು ಇರಬೇಕು. ಹಾಗೂ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ವಾಹನದ ದಾಖಲೆಗಳಾದ ಅರ್ಹತಾ ಪ್ರಮಾಣ ಪತ್ರ, ವಿಮಾ ಪ್ರಮಾಣ ಪತ್ರ, ವಾಯು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಮತ್ತು ತೆರಿಗೆ ಚೀಟಿಗಳನ್ನು ಶಾಲಾ ವಾಹನಗಳಲ್ಲಿ ಇಟ್ಟುಕೊಂಡಿರಬೇಕಾಗಿರುತ್ತದೆ. ಹಾಗೂ ಚಾಲಕರು ಮತ್ತು ಸಹಾಯಕರು ಪೂರ್ಣ ಸಮವಸ್ತ್ರದಲ್ಲಿದ್ದು, ಚಾಲಕರು ಚಾಲ್ತಿಯಲ್ಲಿರುವ ಡಿಎಲ್ ಹೊಂದಿರಬೇಕಾಗುತ್ತದೆ.
ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಶಾಲಾ ಬಸ್‍ಗಳ ತೀವ್ರವಾದ ತಪಾಸಣೆ ಕೈಗೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜು ಬಸ್ ಮಾಲೀಕರು/ ಚಾಲಕರು ನಿಯಮಗಳನ್ನು ಪಾಲಿಸುವಂತೆ ಹಾಗೂ ತಪಾಸಣಾ ಸಮಯದಲ್ಲಿ ಚಾಲ್ತಿಯಲ್ಲಿರುವ ದಾಖಲೆಗಳನ್ನು ತಪಾಸಣೆಗೆ ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎನ್.ಮಧುರ ಸೂಚನೆ ನೀಡಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*