ಮಡಿಕೇರಿ ಜು.11 : ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮುಂದಿನ ಒಂದು ವರ್ಷದ ಅವಧಿಗೆ ಬಿಜೆಪಿಯ ಎಸ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಥಾಯಿ ಸಮಿತಿ ಸದಸ್ಯರುಗಳು ಸತೀಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ಸದಸ್ಯರುಗಳು ಸತೀಶ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
::: ಅಭಿವೃದ್ಧಿಗೆ ಸಹಕಾರ :::
ನಗರದ 23 ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದರೊಂದಿಗೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಸತೀಶ್ ಇದೇ ಸಂದರ್ಭ ಭರವಸೆ ನೀಡಿದರು.










