ಬೆಂಗಳೂರು ಜು.11 : ಅಪಘಾತಗಳ ಮೂಲಕವೇ ಸುದ್ದಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇಲ್ಲಿಯವರೆಗೆ ನಡೆದ ಅಪಘಾತಗಳಲ್ಲಿ ಒಟ್ಟು 100 ಮಂದಿ ಮೃತಪಟ್ಟಿದ್ದಾರೆ. ಸುಮಾರು 335 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ವಿಧಾನಸಭಾ ಅಧಿವೇಶನದಲ್ಲಿ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಪಘಾತಗಳ ಕುರಿತು ವಿವರಿಸಿದರು.
ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣ ಮಾಡಲಾಗಿದೆ. ರಸ್ತೆ ತಿರುವುಗಳಿಗೆ, ವೇಗ ಮಿತಿ ಇಳಿಕೆಗೆ ಯಾವುದೇ ಸೂಚನಾ ಫಲಕಗಳಿಲ್ಲ. ವೇಗವಾಗಿ ವಾಹನ ಓಡಿಸಿ ಬಂದಾಗ ಅಪಘಾತಗಳಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.










