ಮಡಿಕೇರಿ ಜು.11 : ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಜು.15 ರಂದು ನಾಲ್ಕು ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), ಆಪಾಡಂಡ ಎನ್.ಹೇಮಾವತಿ(ಜಾನ್ಸಿ-ತಾಮನೆ-ಬೊಳ್ಳಾರ್‍ಪಂಡ), ಬೊಳ್ಳಜಿರ ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), ಬೊಳ್ಳಜಿರ ಯಮುನ ಅಯ್ಯಪ್ಪ (ತಾಮನೆ-ಮನ್ನೆರ) ಕರವಂಡ ಸೀಮಾ ಗಣಪತಿ ಬರೆದ ಕೊಡವ ಮಕ್ಕಡ ಕೂಟದ 69ನೇ ಪುಸ್ತಕ “ದೇವತೆಯಡ ಮತ್ತು ಕೇಳಿಪೋನಯಿಂಗಡ ಪಾಟ್ ಕಥಾ ರೂಪ” ಹಾಗೂ 70ನೇ ಪುಸ್ತಕ “ಜಾನಪದ ಕತೆ ಜೊಪ್ಪೆ” ಅನಾವರಣಗೊಳ್ಳಲಿದೆ.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೇಜರ್ ರಾಘವ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಎಂ.ಎ.ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, ಸಾಹಿತಿಗಳು ಹಾಗೂ ಎಂ.ಎ.ಕೊಡವ ವಿಭಾಗದ ಉಪನ್ಯಾಸಕರಾದ ಬಾಚರಣಿಯಂಡ ಅಪ್ಪಣ್ಣ, ಬಾಚರಣಿಯಂಡ ರಾಣು ಅಪ್ಪಣ್ಣ, ಡಾ.ಮುಲ್ಲೇಂಗಡ ರೇವತಿ ಪೂವಯ್ಯ, ಅಣ್ಣಳಪಂಡ ಧರ್ಮಶೀಲ ಅಜಿತ್, ಕೊಡವ ಎಂ.ಎ.ವಿದ್ಯಾರ್ಥಿ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, “ಚೆರ್ ಕತೆ ಮತ್ತು ಚೆರ್ ನಾಟಕ” ಪುಸ್ತಕ ಬರಹಗಾರ್ತಿ ಹಾಗೂ ಕೊಡವ ಎಂ.ಎ.ವಿದ್ಯಾರ್ಥಿನಿ ಐಚಂಡ ರಶ್ಮಿ ಮೇದಪ್ಪ, “ಕವನ ಪೊಟ್ಟಿ” ಪುಸ್ತಕ ಬರಹಗಾರ್ತಿ ಹಾಗೂ ಕೊಡವ ಎಂ.ಎ.ವಿದ್ಯಾರ್ಥಿನಿ ಕರವಂಡ ಸೀಮಾ ಗಣಪತಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೊಡವ ಎಂ.ಎ ವಿಭಾಗದ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.









