ಮಡಿಕೇರಿ ಜು.11 : ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣವನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಬಯಲಿಗೆಳೆದಿದೆ.
ವನ್ಯ ಜೀವಿಗಳನ್ನು ಕೆಲವರು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್ ಕುಮಾರ್(38), ಗಣಪತಿ ಬಿನ್ ಮಾಚಯ್ಯ(50) ಹಾಗೂ ಪ್ರಸನ್ನ ಕುಮಾರ್(35) ಎಂಬುವವರ ಮನೆಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದರು. ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಮನೆಯಲ್ಲಿದ್ದ 2 ವನ್ಯಜೀವಿಗಳ ಮಾಂಸವನ್ನು ಪಾತ್ರೆ ಸಹಿತ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ ಪೂವಯ್ಯ ಮತು ವಲಯ ಅರಣ್ಯಾಧಿಕಾರಿ ಮಧುಸೂದನ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಸಾರ್ ಮಹಮ್ಮದ್, ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ, ಕಾರ್ತಿಕ್, ಮನೋಜ್ ಕುಮಾರ್, ದುರ್ಗಾಪ್ರಸಾದ್, ಗಗನ್, ಶರತ್, ಶಂಕರ ಅವರುಗಳು ಕಾರ್ಯಾಚರಣೆ ನಡೆಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*