ಮಡಿಕೇರಿ ಜು.11 : ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವ ರೈತರ ಸಂಶೋಧನೆ ಸಾಧನೆಗಳು ಮೂಲ ಸ್ವರೂಪವಾದದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜುಲೈ, 24 ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. .ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ತಿಳಿಸಿದ್ದಾರೆ.









