ಮಡಿಕೇರಿ ಜು.12 : ನಾಪೋಕ್ಲು ಠಾಣಾ ಸರಹದ್ದಿನ ಕೊಳಕೇರಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಏಳು ಆರೋಪಿಗಳನ್ನು ನಗದು ಸಹಿತ ವಶಕ್ಕೆ ಪಡೆದಿದ್ದಾರೆ.
ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರೋಪಿಗಳ ಬಳಿಯಿಂದ 8540 ರೂ.ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.








